ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿರುವ ಪ್ರಿಯಾಂಕ ಟಿಬ್ರೆವಾಲ್ ಹಿನ್ನೆಲೆ ಏನು ಗೊತ್ತೆ? - Mahanayaka
1:33 AM Wednesday 5 - February 2025

ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿರುವ ಪ್ರಿಯಾಂಕ ಟಿಬ್ರೆವಾಲ್ ಹಿನ್ನೆಲೆ ಏನು ಗೊತ್ತೆ?

mamatha priyanka tibrewal
11/09/2021

ಕೋಲ್ಕತ್ತ: ಪಶ್ಚಿಮ ಬಂಗಾಳದ ಕೆಲವು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ನಡೆಯಲಿದ್ದು, ಈ ಚುನಾವಣೆಯಲ್ಲಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದು, ಈ ನಡುವೆ ಬಿಜೆಪಿಯು ಪ್ರಿಯಾಂಕ ಟಿಬ್ರೆವಾಲ್ ಎಂಬವರನ್ನು ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸಿದೆ.

ಪ್ರಿಯಾಂಕ ಟಿಬ್ರೆವಾಲ್ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ವಿಚಾರಗಳನ್ನು ಕಲ್ಕತ್ತ ಹೈಕೋರ್ಟ್ ಗೆ ಕೊಂಡೊಯ್ದವರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಅರ್ಜಿ ಸಲ್ಲಿಸಿದವರ ಪೈಕಿ ಪ್ರಿಯಾಂಕ ಟಿಬ್ರೆವಾಲ್ ಅವರು ಕೂಡ ಒಬ್ಬರು.

ಸೆ.30ರಂದು ಭವಾನಿಪುರ ಸೇರಿದಂತೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಆ.3ರಂದು ಫಲಿತಾಂಶ ಪ್ರಕಟವಾಗಲಿದೆ. ಮಮತಾ ಬ್ಯಾನರ್ಜಿ ಅವರು  ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಮತಾ ಬ್ಯಾನರ್ಜಿಗೆ ಈ ಚುನಾವಣೆ ಪ್ರತಿಷ್ಠೆ ಕೂಡ ಆಗಿದೆ. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಂತೆಯೇ ಬಿಜೆಪಿ ಕೂಡ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಮೂಲಕ ಮಮತಾ ಬ್ಯಾನರ್ಜಿಗೆ ಶಾಕ್  ನೀಡಿದೆ.

ಪ್ರಿಯಾಂಕ ಟಿಬ್ರೆವಾಲ್ ಅವರು ಕಲ್ಕತ್ತಾ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದಿದ್ದಾರೆ. ಕಲ್ಕತ್ತಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯವಾದಿಯಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ  ಮಂತ್ರಿಯಾಗಿದ್ದ ಬಬುಲ್ ಸುಪ್ರಿಯೋ ಅವರಿಗೆ ಟೆಬ್ರೆವಾಲ್ ಕಾನೂನು ಸಲಹೆಗಾರರಾಗಿದ್ದರು.

2020ರಿಂದ ಬಿಜೆಪಿಯ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿರುವ ಟ್ರಿಬ್ರೆವಾಲ್, 2014ರಲ್ಲಿ  ಬಿಜೆಪಿ ಸೇರ್ಪಡೆಗೊಂಡಿದ್ದರು. 2015ರಲ್ಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಗೆ ಸ್ಪರ್ಧಿಸಿದ್ದ ಅವರು, ಆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, 58 ಸಾವಿರ ಮತಗಳ ಭಾರೀ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದರು. ಇನ್ನೂ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲು ಬಿಜೆಪಿಯಲ್ಲಿ ಯಾರು ಕೂಡ ಮುಂದೆ ಬರದ ಹಿನ್ನೆಲೆಯಲ್ಲಿ ಇದೀಗ ಪ್ರಿಯಾಂಕ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಚುನಾವಣೆಯಲ್ಲಿ ಬಿಜೆಪಿ ಮುಖ್ಯ ವಿಷಯವಾಗಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಹಿಂಸಾಚಾರವನ್ನೇ ಮೂಲ ವಿಚಾರವಾಗಿ ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಬೈಕ್ ಸ್ಕಿಡ್ ಆಗಿ ಖ್ಯಾತ ನಟನಿಗೆ ಗಂಭೀರ ಗಾಯ: ಅಪೋಲೊ ಆಸ್ಪತ್ರೆಗೆ ದೌಡಾಯಿಸಿದ ಹಿರಿಯ ನಟರು

ಯುವತಿಯನ್ನು ಅತ್ಯಾಚಾರ ಎಸಗಿ ಪರಾರಿಯಾದ ಗ್ರಾಮ ಲೆಕ್ಕಾಧಿಕಾರಿ!

ಮತಾಂತರದ ಸುಳ್ಳು ಆರೋಪ ಹೊರಿಸಿ, ಗುಂಪಿನಿಂದ ದಾಂಧಲೆ: ಕ್ರಮಕ್ಕೆ ಆಗ್ರಹ

ಹುಡುಗಿಯರಿಗೆ ಉಚಿತ ಬ್ಯೂಟಿ ಪಾರ್ಲರ್, ಹಿರಿಯರಿಗೆ ತಂಬಾಕು, ಬೀಡಿ ಫ್ರೀ: ಗ್ರಾಪಂ ಅಭ್ಯರ್ಥಿಯ ಪ್ರಣಾಳಿಕೆ!

ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಕ್ಕೆ ರಾಡ್ ನುಗ್ಗಿಸಿದ ದುಷ್ಟರು: ಮಹಿಳೆಯ ಸ್ಥಿತಿ ಚಿಂತಾಜನಕ

ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ?

ಮೊದಲು ಕಾಂಗ್ರೆಸ್ ನ್ನು ತೊಡೆದು ಹಾಕಬೇಕು | ನಟ ಅಹಿಂಸಾ ಚೇತನ್

ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್

ಇತ್ತೀಚಿನ ಸುದ್ದಿ