ಅರೆಸ್ಟ್: ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ - Mahanayaka

ಅರೆಸ್ಟ್: ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

31/10/2024

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಮತ್ತು 2 ಕೋಟಿ ರೂ.ಗಳ ಬೇಡಿಕೆ ಇಟ್ಟ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಾಂದ್ರಾದಲ್ಲಿ ಬಂಧಿಸಿದ್ದಾರೆ.


Provided by

ಹಣ ನೀಡದಿದ್ದರೆ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯಿಂದ ಮುಂಬೈ ಸಂಚಾರ ಪೊಲೀಸರಿಗೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಈ ಬಂಧನ ನಡೆದಿದೆ.

ಬಂಧಿತ ಆರೋಪಿಯನ್ನು ಬಾಂದ್ರಾ ಪೂರ್ವ ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


Provided by

ಇನ್ನು ಮತ್ತೊಂದು ಕೇಸಲ್ಲಿ ಸಲ್ಮಾನ್ ಖಾನ್ ಮತ್ತು ಬಾಂದ್ರಾ ಪೂರ್ವ ಎನ್‌ಸಿಪಿ ಶಾಸಕ ಜೀಶಾನ್ ಸಿದ್ದಿಕಿ ಅವರಿಗೆ ಬೆದರಿಕೆ ಹಾಕಿದ 20 ವರ್ಷದ ವ್ಯಕ್ತಿಯನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ.

ಆರೋಪಿಯನ್ನು ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾಗಿದ್ದು, ಜೀಶಾನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ