ತುಳು ಧ್ವಜಕ್ಕೆ ಅವಮಾನ ಮಾಡಿದ ಕಿಡಿಗೇಡಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಮಂಗಳೂರು ಪೊಲೀಸರು

man arrested to insulted tulu flag
18/06/2021

ಮಂಗಳೂರು: ತುಳು ಧ್ವಜಕ್ಕೆ ಅವಮಾನ ಮಾಡಿರುವ ಕಿಡಿಗೇಡಿಯನ್ನು ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ಬಂಧಿಸಿದ್ದು, ತುಳು ಭಾಷೆಯ ಧ್ವಜಕ್ಕೆ ಅವಮಾನ ಮಾಡಿದ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರ ತಂಡ ಆರೋಪಿಯನ್ನು ಹೆಡೆಮುರಿಕಟ್ಟಿದೆ.

ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.  ಈತ,  ಪಾದ ರಕ್ಷೆಯಲ್ಲಿ ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದ ಕಿಡಿಗೇಡಿ. “ಇವತ್ತು ತುಳುನಾಡ್ ಚಪ್ಪಲ್ ಬಂದಿದೆ. ನಾಳೆ ಬಿಕಿನಿಯು ಬರಬಹುದು. ಹಾಕಿಕೊಂಡು ಮಜಾ ಮಾಡಿ” ಎಂದು ಆಕ್ಷೇಪಾರ್ಹ ಸಂದೇಶವನ್ನು ಹರಿಯಬಿಟ್ಟಿದ್ದಾನೆ.

ಈ ಆಕ್ಷೇಪಾರ್ಹ ಪೋಸ್ಟ್ ವಿರುದ್ಧ  ಕಾರ್ಪೋರೇಟರ್ ಶಶಿಧರ್ ಹೆಗ್ಡೆ ದೂರು ನೀಡಿದ್ದರು. ಈ ದೂರಿನನ್ವಯ ತಕ್ಷಣ ಕ್ರಮಕೈಗೊಂಡ ಬರ್ಕೆ ಹಾಗೂ ಉರ್ವ ಠಾಣಾ ಪೊಲೀಸರು, ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version