ಪತ್ನಿಯ ಕಿರುಕುಳಕ್ಕೆ ಬೇಸತ್ತ: ವೀಡಿಯೋ ಮಾಡಿ ಪತಿ ಆತ್ಮಹತ್ಯೆ

ಬೆಂಗಳೂರಿನ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದ್ದು ಪತ್ನಿಯ ಕಿರುಕುಳಕ್ಕೆ ಬೇಸತ್ತ ಐಟಿ ಮ್ಯಾನೇಜರ್ ಮಾನವ್ ಶರ್ಮಾ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಕಳೆದ ಸೋಮವಾರ ಆಗ್ರಾದಲ್ಲಿ ನಡೆದಿದೆ. ಆತ್ಮಹ*ತ್ಯೆಗೂ ಮುನ್ನ ಮಾನವ್ 7 ನಿಮಿಷಗಳ ವಿಡಿಯೋ ಕೂಡ ಮಾಡಿದ್ದು ಇದರಲ್ಲಿ ಪತ್ನಿಯಿಂದ ತನಗೆ ಆದ ಚಿತ್ರಹಿಂಸೆಯನ್ನು ಪ್ರಸ್ತಾಪಿಸಿದ್ದಾನೆ.
ಆಗ್ರಾದಲ್ಲಿ ಐಟಿ ಕಂಪನಿಯ ಮ್ಯಾನೇಜರ್ ಆಗಿದ್ದ ಮಾನವ್ ಶರ್ಮಾನ ಸಾವಿನಿಂದ ಪಾಲಕರು ಆಘಾತಕ್ಕೊಳಗಾಗಿದ್ದು. ಸಿಎಂ ಪೋರ್ಟಲ್‌ನಲ್ಲಿ ದೂರು ದಾಖಲಿಸಿ ತಮ್ಮ ಮಗನಿಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಮಾನವ್ ಶರ್ಮಾ ಮೂಲತಃ ಆಗ್ರಾದ ಡಿಫೆನ್ಸ್ ಕಾಲೋನಿಯ ನಿವಾಸಿಯಾಗಿದ್ದು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾನವ್ ಅವರ ತಂದೆ ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದು ನಿವೃತ್ತರಾಗಿದ್ದಾರೆ.
ಮಾನವ್ ಶರ್ಮರ ತಂದೆ ನರೇಂದ್ರ ಶರ್ಮಾರ ಹೇಳಿಕೆಯಂತೆ ತನ್ನ ಮಗನಿಗೆ ಕಳೆದ ವರ್ಷ ಜನವರಿಯಲ್ಲಿ ಮದುವೆಯಾಗಿದ್ದು ಮಗ, ಸೊಸೆ ಇಬ್ಬರೂ ಮುಂಬೈ ಯಲ್ಲಿ ವಾಸವಾಗಿದ್ದು ಅನ್ಯೋನ್ಯವಾಗಿದ್ದರು ಆದರೆ ಕೆಲವೇ ತಿಂಗಳ ಬಳಿಕ ಸೊಸೆ ಮಗನ ಜೊತೆ ಜಗಳ ಮಾಡಲು ಆರಂಭಿಸಿದ್ದಾಳೆ ಅಲ್ಲದೆ ತಮ್ಮ ಕುಟುಂಬದ ಮೇಲೆ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡುವ ಬಗ್ಗೆಯೂ ಬೆದರಿಸುತಿದ್ದಳು ಎಂದು ಹೇಳಿದ್ದಾರೆ.
ಇದಾದ ಕೆಲ ಸಮಯದ ಬಳಿಕ ಮಗ ಸೊಸೆ ಆಗ್ರಾಕ್ಕೆ ಬಂದಿದ್ದು ಮಗ ಸೊಸೆಯನ್ನು ತಾಯಿ ಮನೆಗೆ ಬಿಟ್ಟು ಬಂದಿದ್ದ ಈ ವೇಳೆ ಅತ್ತೆ ಮಾವ ಮಾನವ್ ಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು ಇದಾದ ಮರುದಿನ ಅಂದರೆ ಫೆ. 24 ರಂದು ಮುಂಜಾನೆ 5 ಗಂಟೆಗೆ ಮಾನವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj