ಮರಗಸಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯ ದಾರುಣ ಸಾವು - Mahanayaka
9:43 AM Thursday 6 - February 2025

ಮರಗಸಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯ ದಾರುಣ ಸಾವು

goni beedu ganesh
14/03/2023

ಮೂಡಿಗೆರೆ:  ಮರಗಸಿ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು  ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗಣೇಶ್ ಪೂಜಾರಿ (38) ಮೃತ ದುರ್ದೈವಿಯಾಗಿದ್ದು, ಇವರು ಶ್ರೀಧರ್ ಮೂಡಿಗೆರೆ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗಣೇಶ್ ಪೂಜಾರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆ ಸಂಬಂಧ ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ