ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವಿಗೆ ಶರಣು!
21/11/2024
ಹಾಸನ: ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ(40) ಸಾವಿಗೆ ಶರಣಾದವರಾಗಿದ್ದಾರೆ. ಕಾಫಿ ಬೆಳೆಗಾರನಾಗಿರುವ ಕರುಣಾಕರ ವಿವಾಹಿತರಾಗಿದ್ದು, ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದಾಗಿ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದ್ದು, ಕೌಟುಂಬಿಕ ಕಲಹದಿಂದ ನೊಂಡು ಕರುಣಾಕರ ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಕರುಣಾಕರ ಸಾವಿಗೆ ಶರಣಾಗಿದ್ದಾರೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: