ಡಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮಗ ಸಾವು: ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಸಾವು
ಮುಂಬೈ: ಗಾರ್ಬಾ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದ ತಂದೆ, ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ.
ಭಾನುವಾರ ಮಧ್ಯರಾತ್ರಿ ವಿರಾರ್ ನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮದಲ್ಲಿ 35 ವರ್ಷ ವಯಸ್ಸಿನ ಮನಿಶ್ ನಾರಾಪ್ಜಿ ಸೋನಿಗ್ರಾ ಎಂಬ ಯುವಕ ಡಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದ.
ಆತನನ್ನು ತಕ್ಷಣವೇ ತಂದೆ ನಾರಾಪ್ಜಿ ಸೋನಿಗ್ರಾ ಅವರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪುತ್ರ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅವರು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಂದೆ ಹಾಗೂ ಮಗ ಇಬ್ಬರ ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸದ್ಯ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka