ಕಿಲ್ಲರ್: ಹೋಟೆಲ್ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಂದ ವ್ಯಕ್ತಿ - Mahanayaka
10:44 AM Wednesday 12 - March 2025

ಕಿಲ್ಲರ್: ಹೋಟೆಲ್ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಂದ ವ್ಯಕ್ತಿ

01/01/2025

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿ ಅರ್ಷದ್ ನನ್ನು ಬಂಧಿಸಲಾಗಿದೆ.

ಐವರು ಕತ್ತರಿಸಿದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಮತ್ತು ಅವರ ಬಟ್ಟೆಗಳು ರಕ್ತದಲ್ಲಿ ಒದ್ದೆಯಾಗಿವೆ. ಆಹಾರದಲ್ಲಿ ಮಾದಕ ದ್ರವ್ಯಗಳನ್ನು ಬೆರೆಸಿದ ನಂತರ ಅರ್ಷದ್ ಅವರನ್ನು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅರ್ಷದ್ ತಂದೆ ಬಾದರ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಆಗ್ರಾ ಮೂಲದ ಈ ಕುಟುಂಬವು ಡಿಸೆಂಬರ್ 30 ರಿಂದ ಹೋಟೆಲ್ ನಲ್ಲಿ ಉಳಿದುಕೊಂಡಿತ್ತು. ಮೃತರನ್ನು ಅರ್ಷದ್ ಅವರ ತಾಯಿ ಅಸ್ಮಾ ಮತ್ತು ಅವರ ಸಹೋದರಿಯರು ಕ್ರಮವಾಗಿ 9, 16, 18 ಮತ್ತು 19 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ.


Provided by

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ತೀವ್ರ ವಾಗ್ವಾದವು ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ತನಿಖೆ ಪೂರ್ಣಗೊಂಡ ನಂತರ, ಕೊಲೆಗಾರನ ಉದ್ದೇಶದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾವು ಬಹಿರಂಗಪಡಿಸಬಹುದು ಎಂದು ಲಕ್ನೋ ಉನ್ನತ ಪೊಲೀಸ್ ಅಧಿಕಾರಿ ರವೀನಾ ತ್ಯಾಗಿ ಸುದ್ದಿಗಾರರಿಗೆ ತಿಳಿಸಿದರು.
ಘಟನೆಯ ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ 24 ವರ್ಷದ ಅರ್ಷದ್ ನನ್ನು ಹೋಟೆಲ್ ನಿಂದ ಬಂಧಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ