ತೋಟದ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿ ನಿಗೂಢ ನಾಪತ್ತೆ
ತೋಟದ ಕೆಲಸಕ್ಕೆಂದು ಒಡಿಶಾದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ.
ಒಡಿಶಾ ಮೂಲದ 27ವರ್ಷದ ಡೇಬಿಡ್ ಮಾಜಿ ನಾಪತ್ತೆಯಾದ ವ್ಯಕ್ತಿ. ಇವರು, ಕೆರ್ವಾಶೆ ಗ್ರಾಮದ ಸತೀಶ ಪ್ರಭು ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲೇ ಬಿಡಾರದಲ್ಲಿ ವಾಸವಾಗಿದ್ದರು.
ನ.17ರ ಬೆಳಿಗ್ಗೆ 9:30ಕ್ಕೆ ಸೊತ್ತುಗಳನ್ನೆಲ್ಲ ಬಿಡಾರದಲ್ಲಿ ಬಿಟ್ಟು ನಿಗೂಢವಾಗಿ ಕಾಣೆಯಾಗಿದ್ದಾರೆ. ಈ ಬಗ್ಗೆ ತೋಟದ ಮಾಲೀಕ ಸತೀಶ್ ಪ್ರಭು ನೀಡಿದ ದೂರಿನಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka