ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ - Mahanayaka

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

manglore
05/08/2023

ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.


Provided by

ಮಂಗಳೂರು ನಗರದ ಕಂಕನಾಡಿ- ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಮುಹಮ್ಮದ್ ಅಝೀಝ್ (40) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 2 ಕೆಜಿ ತೂಕದ ಆಂದಾಜು ರೂ. 50,000 ಮೌಲ್ಯದ ಗಾಂಜಾ, ಸುಝುಕಿ ಅಕ್ಸಸ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,05,000/-ಆಗಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.


Provided by

ಆರೋಪಿಯ ವಿರುದ್ಧ ಈ ಹಿಂದೆ 2022 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ