ಊಟಕ್ಕೆ ಹೊಟೇಲ್ ನಿಂದ ಸಾಂಬಾರ್ ತರುತ್ತಿದ್ದ ವೇಳೆ ವ್ಯಕ್ತಿಗೆ ರೈಲು ಡಿಕ್ಕಿ!
ಊಟಕ್ಕೆ ಹೊಟೇಲ್ ನಿಂದ ಸಾಂಬಾರ್ ಕೊಂಡು ಮನೆಗೆ ಹೋಗಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ರಾತ್ರಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ. ಶ್ರವಣ್ ದಾಸ್ ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟುವಿನಲ್ಲಿರುವ ನಿವಾಸಕ್ಕೆ ಬಂದಿದ್ದರು. ಈ ವೇಳೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿ ವಾಪಸ್ ರೈಲ್ವೆ ಹಳಿ ದಾಟಿ ಬರುವಾಗ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಿಸೆಯಲ್ಲಿ ದೊರೆತ ಆಧಾರ್ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಿದ್ದಾರೆ. ಅವರ ಪತ್ನಿ ಮಕ್ಕಳು ಬಿಹಾರದಲ್ಲಿದ್ದು, ಶ್ರವಣ್ ದಾಸ್ ಬಾಡಿಗೆ ಕೊಠಡಿಯಲ್ಲಿ ಒಂಟಿಯಾಗಿ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw