ಮಹಿಳೆಯ ವೇಷ ಧರಿಸಿ ಬಸ್ ನಿಲ್ದಾಣಕ್ಕೆ ಬಂದ ಪುರುಷ, ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ!
ಧಾರವಾಡ: ಮಹಿಳೆಯ ವೇಷ ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಪತ್ತೆ ಹಚ್ಚಿ, ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾನದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿ ವ್ಯಕ್ತಿ ಕುಳಿತಿದ್ದು, ಮಹಿಳೆಯ ವೇಷದಂತೆ ಕಂಡು ಅನುಮಾನಗೊಂಡ ಸಾರ್ವಜನಿಕರು ಬುರ್ಖಾ ತೆಗೆಸಿದಾಗ, ಪುರುಷ ಮಹಿಳೆಯ ವೇಷ ಧರಿಸಿರುವುದು ಪತ್ತೆಯಾಗಿದೆ.
ವ್ಯಕ್ತಿಯನ್ನು ವಿಚಾರಿಸಿದಾಗ, ತಾನು ವೀರಭದ್ರಯ್ಯ ನಿಂಗಯ್ಯ ಮಠಪತಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಘೋಡಗೋರಿ ನಿವಾಸಿ ಎಂದು ಒಪ್ಪಿಕೊಂಡಿದ್ದು, ಬುರ್ಖಾ ಧರಿಸಿ ಮಹಿಳೆಯ ವೇಷದಲ್ಲಿ ಈತ ಭಿಕ್ಷೆ ಬೇಡುತ್ತಿರುವುದಾಗಿ ತಿಳಿಸಿದ್ದಾನೆನ್ನಲಾಗಿದೆ.
ಹೆಚ್ಚಿನ ಜನರು ಈತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವ ಕಾರಣ ಮಹಿಳೆಯ ವೇಷ ಧರಿಸಿ ಬಂದಿದ್ದಾನೆ ಎಂದೇ ಭಾವಿಸಿದ್ದರು, ಆದ್ರೆ ಭಿಕ್ಷಾಟನೆಗೆ ಈ ವೇಷ ಧರಿಸಿರುವುದು ತಿಳಿಯುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು..
ಇನ್ನೂ ವ್ಯಕ್ತಿಯ ಬಳಿಯಲ್ಲಿ ಮುಸ್ಲಿಮ್ ಮಹಿಳೆಯ ಆಧಾರ್ ಕಾರ್ಡ್ ಝೆರಾಕ್ಸ್ ಕೂಡ ಇದ್ದು, ಹಲವು ಸಂಶಯಗಳಿಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
ಲೈವ್ ವಿಡಿಯೋ ನೋಡಿ: