ಹೆಂಡತಿಗೆ ಮೊಬೈಲ್ ನಂಬರ್ ನೀಡಿದವನಿಗೆ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದ ಗಂಡ!

chikkamagaluru
16/07/2023

ಚಿಕ್ಕಮಗಳೂರು: ಹೆಂಡತಿಗೆ ಮೊಬೈಲ್ ನಂಬರ್ ನೀಡಿದ್ದಕ್ಕೆ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯ ಪತಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ.

ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ಬಶೀರ್ ಎಂಬಾತ ಹಲ್ಲೆಗೊಳಗಾಗಿರುವ ವ್ಯಕ್ತಿ ಎನ್ನಲಾಗಿದೆ. ಕಟ್ಟೆಮನೆ ಗ್ರಾಮದ ರಮೇಶ್ ಎಂಬುವವರ ಪತ್ನಿಗೆ ಬಶೀರ್ ನಂಬರ್ ನೀಡಿದ್ದ ಎಂದು ಆರೋಪಿಸಿ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪತ್ನಿಗೆ ಮೊಬೈಲ್ ನಂಬರ್ ನೀಡಿರುವ ಬಗ್ಗೆ ಪ್ರಶ್ನಿಸಿದ ಪತಿ ರಮೇಶ್ ಬಶೀರ್ ಗೆ ನಡುರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಶೀರ್ ಮಹಿಳೆಯರಿಗೆ ಮೊಬೈಲ್ ನಂಬರ್ ಕೊಟ್ಟು ಕಾಲ್ ಮಾಡುವಂತೆ ಟಾರ್ಚರ್ ಕೊಡುತ್ತಿದ್ದ ಎಂದು ಆರೋಪಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version