ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು
![manmohan singh](https://www.mahanayaka.in/wp-content/uploads/2021/04/manmohan-singh-1.jpg)
19/04/2021
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಜ್ವರದ ಹಿನ್ನೆಲೆಯಲ್ಲಿ ಡಾ.ಸಿಂಗ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ರವಿವಾರ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪುಟಗಳ ಪತ್ರ ಬರೆದಿದ್ದು, ಭಾರತದಲ್ಲಿ ಕೊರೊನಾ ಪರಿಸ್ಥಿತಿಗಳನ್ನು ನಿಯಂತ್ರಣ ಮಾಡುವಂತೆ ಹಲವು ಸಲಹೆಗಳನ್ನು ನೀಡಿದ್ದರು.