ತಾಯಿಯ ಜೊತೆಗೆ ವಾಸವಿದ್ದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ! - Mahanayaka
7:36 AM Thursday 12 - December 2024

ತಾಯಿಯ ಜೊತೆಗೆ ವಾಸವಿದ್ದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ!

uppinangady
16/05/2021

ಉಪ್ಪಿನಂಗಡಿ: ಮಾನಸಿಕ ಅಸ್ವಸ್ಥೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ದರ್ಬೆ ನಿವಾಸಿಯೋರ್ವನ ವಿರುದ್ಧ ದೂರು ದಾಖಲಾಗಿದೆ.

 

ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಯಾಗಿದ್ದ 44 ವರ್ಷ ವಯಸ್ಸಿನ ಸಂತ್ರಸ್ತ ಮಹಿಳೆ ತನ್ನ ತಾಯಿಯ ಜೊತೆಗೆ 34 ನೆಕ್ಕಿಲಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮಹಿಳೆಯ ಪತಿ ಗುಜರಾತ್ ನಲ್ಲಿದ್ದು, ಕಳೆದ 10 ತಿಂಗಳ ಹಿಂದೆ ಅವರು ಗುಜರಾತ್ ಗೆ ತೆರಳಿದ್ದರು. ಆ ಬಳಿಕ ಅವರು ಊರಿಗೆ ಬಂದಿರಲಿಲ್ಲ.

 

ಈ ನಡುವೆ  ಮೇ 12ರಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಹಿಳೆ ಬಂದಾಗ ಅನುಮಾನಗೊಂಡ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಮಹಿಳೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ.

 

ಈ ಬಗ್ಗೆ ವಿಚಾರಿಸಿದಾಗ ಪುತ್ತೂರು ತಾಲೂಕಿನ ದರ್ಬೆ ನಿವಾಸಿ ಸುರೇಶ್ ಪ್ರಭು ಎಂಬ ಕಾಮುಕ ಮಹಿಳೆಯನ್ನು ಅತ್ಯಾಚಾರ ನಡೆಸಿರುವುದು ತಿಳಿದು ಬಂದಿದೆ. ಈ ಬಗ್ಗೆ ಮಹಿಳೆಯ ತಾಯಿ ಕಾಮುಕ ಸುರೇಶ್ ಪ್ರಭು ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾಮುಕನ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ