ವಯನಾಡ್ ದುರಂತದಲ್ಲಿ ಮೃತಪಟ್ಟ ಮಂಡ್ಯದ ಅಜ್ಜಿ, ಮೊಮ್ಮಗ ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ! - Mahanayaka
9:49 PM Wednesday 30 - October 2024

ವಯನಾಡ್ ದುರಂತದಲ್ಲಿ ಮೃತಪಟ್ಟ ಮಂಡ್ಯದ ಅಜ್ಜಿ, ಮೊಮ್ಮಗ ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ!

wayanad
02/08/2024

ಮಂಡ್ಯ:  ಕೇರಳದ ವಯನಾಡ್ ನ ಭೀಕರ ಗುಡ್ಡ ಕುಸಿತದಲ್ಲಿ  ಸಾವನ್ನಪ್ಪಿದ ಮಂಡ್ಯ ಮೂಲದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ರಾತ್ರಿ ಕತ್ತರಿಘಟ್ಟ ಗ್ರಾಮದಲ್ಲಿ ನಡೆಯಿತು.

ಸೋಮವಾರ ಮಧ್ಯರಾತ್ರಿ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ಸಂಭವಿಸಿತ್ತು. ಈ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ  ಅಜ್ಜಿ ಲೀಲಾವತಿ ಹಾಗೂ ಮೊಮ್ಮಗ ನಿಹಾಲ್ ಅವರ ಮೃತದೇಹ ಮಣ್ಣಿನಡಿಯಲ್ಲಿ ಗುರುವಾರ ಪತ್ತೆಯಾಗಿತ್ತು.

ವಯನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು. ಗುರುವಾರ ಮಧ್ಯರಾತ್ರಿ ಮೃತದೇಹಗಳನ್ನು ಕತ್ತರಿಘಟ್ಟ ಗ್ರಾಮಕ್ಕೆ ತರಲಾಗಿತ್ತು.

ಅಜ್ಜಿ ಹಾಗೂ ಮೊಮ್ಮಗನನ್ನು ಒಂದೇ ಚಿತೆಯಲ್ಲಿಟ್ಟು ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಕುಟುಂಬದ ಇಬ್ಬರನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ