ಮನೆ ಕುಸಿದು 7 ಮಂದಿ ಸಾವು ಪ್ರಕರಣ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ಮೃತರ ಆತ್ಮಕ್ಕೆ ಶಾಂತಿ ಸಿಗಲು ಪ್ರಾರ್ಥಿಸಿದ್ದಾರೆ ಎಂದು ಸಿಎಂ ಕಚೇರಿ ಟ್ವೀಟ್ ಮಾಡಿದೆ.
ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಉಸ್ತುವಾರಿಯಾಗಿರುವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಅಣಬೆ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ | ಮಹಿಳೆಯ ಸ್ಥಿತಿ ಗಂಭೀರ
ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಸಾವು!
ದೂರವಾಗಿದ್ದ ಪತ್ನಿಯ ಬಳಿಗೆ ಬಂದು ಅಪ್ಪಿಕೊಂಡ ಪತಿ | ಕ್ಷಣ ಮಾತ್ರದಲ್ಲಿ ಇಬ್ಬರ ದೇಹವೂ ಛಿದ್ರಛಿದ್ರ!
ತಂದೆಯಿಂದಲೇ ಮಗನ ಮೇಲೆ ಗುಂಡೇಟು: ಬಾಲಕನ ಮೆದುಳು ನಿಷ್ಕ್ರಿಯ | ಅಂಗಾಂಗ ದಾನಕ್ಕೆ ಸಿದ್ಧತೆ
ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!
ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ