ಮನೆಯ ಎದುರು ಮಲಗಿದ್ದ ನಾಯಿಯನ್ನು ಹಿಡಿದ ಚಿರತೆ: ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಭಯಾನಕ ದೃಶ್ಯ
ಪರ್ಕಳ: ಹೆಜ್ಜೆಯ ಮೇಲೊಂದು ಹೆಜ್ಜೆಯನ್ನಿಟ್ಟು ಬಂದ ಚಿರತೆ ಮನೆಯ ಎದುರು ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ಹೆರ್ಗಾ ಗ್ರಾಮದ ಗೋಳಿಕಟ್ಟೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಬಾಲಚಂದ್ರ ಕೆದ್ಲಾಯ ಎಂಬವರ ಮನೆಯ ಮುಂಭಾಗದಿಂದ ರಾತ್ರಿ ವೇಳೆ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮನೆಯ ಮುಂದೆ ನಾಯಿ ಗಾಢವಾದ ನಿದ್ದೆಯಲ್ಲಿತ್ತು ಮನೆಯವರು ಮನೆಯೊಳಗೆ ನಿದ್ದೆ ಹೋಗಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಚಿರತೆ ನಾಯಿಯನ್ನು ಹೊತ್ತೊಯ್ಯಲು ಯತ್ನಿಸಿದೆ.
ನಾಯಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಲಾಗಿತ್ತು. ಚಿರತೆ ನಾಯಿಯನ್ನು ಕೊಂದು ಹಾಕಿದರೂ ಎಳೆದೊಯ್ಯಲು ಸಾಕಷ್ಟು ಹರಸಾಹಸ ಪಟ್ಟಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದರಿಂದಾಗಿ ಸ್ಥಳೀಯ ನಾಗರಿಕರು ಭಯಭೀತರಾಗಿದ್ದಾರೆ. ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು , ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka