ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ - Mahanayaka
4:19 AM Wednesday 5 - February 2025

ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ

fire
08/03/2022

ವರ್ಕಳ:  ತಡ ರಾತ್ರಿ ಮನೆಗೆ ಬೆಂಕಿ ಬಿದ್ದು, ಐವರು ಸಜೀವ ದಹನವಾದ ದಾರುಣ ಘಟನೆ ಕೇರಳದ ವರ್ಕಳದಲ್ಲಿ ನಡೆದಿದ್ದು,  ನಿನ್ನೆ ತಡರಾತ್ರಿ 1:45ರ ವೇಳೆಗೆ ಈ ದುರಂತ ಸಂವಿಸಿದೆ ಎಂದು ತಿಳಿದು ಬಂದಿದೆ.

ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್ ಮೃತಪಟ್ಟವರಾಗಿದ್ದು, ಅಭಿರಾಮಿ ಅವರು ಈ ಕುಟುಂಬದ ಪ್ರಮುಖರಾಗಿದ್ದರು. ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೃತಪಟ್ಟ ಪ್ರತಾಪನ್ ಅವರ ಹಿರಿಯ ಮಗ ನಿಹುಲ್ ಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗೆ ಬೆಂಕಿ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ 5 ಬೈಕ್ ಗಳು ಸುಟ್ಟು ಹೋಗಿವೆ. ಮನೆ ಎಸಿ ಕೂಡ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ. ಮನೆಗೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ  ಘಟನಾ ಸ್ಥಳದಲ್ಲಿ ವಿಧಿ ವಿಜ್ಞಾನ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಎಸ್ ಪಿ ದಿವ್ಯಾ ಗೋಪಿನಾಥ್  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮಭೂಮಿಗಾಗಿ ಹೋರಾಡಿದ ಧರ್ಮಶೀಲ ಭಂತೇಜಿ

ಈರುಳ್ಳಿ ಸೇವನೆಯಿಂದಾಗುವ ಪ್ರಯೋಜನಗಳೇನು?

ಸರ್ಕಾರಿ ವೈದ್ಯರು ಖಾಸಗಿ ಕಂಪೆನಿ ಔಷಧ ಸೂಚಿಸಿದರೆ ಕ್ರಮ: ಸಚಿವ ಸುಧಾಕರ್

ಪ್ರಿಯಕರನ ಜೊತೆ ಕರ್ನಾಟಕಕ್ಕೆ ಬಂದು ಮದುವೆಯಾದ ತಮಿಳುನಾಡು ಸಚಿವರ ಪುತ್ರಿ

ಪ್ರೀತಿಸಿ ಮದುವೆಯಾದ ಯುವತಿಯನ್ನು ಎಳೆದೊಯ್ದ ಪೊಲೀಸರು

ಇತ್ತೀಚಿನ ಸುದ್ದಿ