ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ
ಮಣಿಪಾಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲ ಈಶ್ವರನಗರದ ಸಮೀಪದ ವಿವೇಕಾನಂದ ನಗರ ಎಂಬಲ್ಲಿ ಇಂದು ನಡೆದಿದೆ.
ವಿವೇಕಾನಂದ ನಗರ ನಿವಾಸಿ ರವಿರಾಜ್ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆಯ ಪಿಠೋಪಕರಣಗಳು ಸುಟ್ಟು ಕರಕಲಾಗಿದೆ.
ಘಟನೆ ನಡೆದಾಗ ಮನೆಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಕೂಡಲೇ ಗಮನಿಸಿದ ನೆರೆಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ, ಸಂಪೂರ್ಣ ಬೆಂಕಿ ನಂದಿಸಿದರು. ಘಟನೆಯಲ್ಲಿ 2 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka