ಮನೆಗೆ ತಲುಪಿದ ಫಾಝಿಲ್ ಮೃತದೇಹ: ಮಸೀದಿ ವಠಾರದಲ್ಲಿ ಜಮಾಯಿಸಿರುವ ಜನ

ಸುರತ್ಕಲ್: ಕಳೆದ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಇದೀಗ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಮಂಗಳಪೇಟೆಯಲ್ಲಿರುವ ಫಾಝಿಲ್ ಮನೆಗೆ ಮೃತದೇಹ ತಲುಪಿದ್ದು, ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಮಸೀದಿ ವಠಾರದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕಳೆದ ರಾತ್ರಿ ಸುರತ್ಕಲ್ ನಲ್ಲಿ ಫಾಝಿಲ್ ತನ್ನ ಸ್ನೇಹಿತನ ಜೊತೆಗೆ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿತ್ತು.
ಮನೆಯಿಂದಲೇ ಪ್ರಾರ್ಥನೆ ಸಲ್ಲಿಸಲು ಮನವಿ:
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಸಂಬಂಧ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ನಗರದ ಎಲ್ಲಾ ಮುಸ್ಲಿಮರು ತಮ್ಮ ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನಡೆಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka