ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವು | ಇಬ್ಬರು ಮಕ್ಕಳ ಸ್ಥಿತಿ ಗಂಭೀರ - Mahanayaka

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವು | ಇಬ್ಬರು ಮಕ್ಕಳ ಸ್ಥಿತಿ ಗಂಭೀರ

telangana news
10/10/2021


Provided by

ತೆಲಂಗಾಣ:  ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್​ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇದೇ ಕುಟುಂಬದ ಇನ್ನಿಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇವರ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದೆ. ರಾತ್ರಿ ನಿದ್ರಿಸುತ್ತಿದ್ದ ವೇಳೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮವಾಗಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿನ್ನೆ ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಬದುಕುಳಿದ ಇಬ್ಬರು ಮಕ್ಕಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ ಮತ್ತು ತೆಲಂಗಾಣದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಮನೆ ಕುಸಿದು ಬಿದ್ದಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ತುಮಕೂರು: ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸ್ವಂತ ನಿವೇಶನ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ

ವಿಚಿತ್ರ ಫೋಟೋ ಹಂಚಿಕೊಂಡು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಮೋಹಕ ತಾರೆ ರಮ್ಯಾ!

ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

“ಧೈರ್ಯವಿದ್ದರೆ ಗುಡ್ಡೆ ಮೈದಾನಕ್ಕೆ ಬಾ” ಎಂದು ಕರೆದು ಸಹೋದರರಿಬ್ಬರ ಮೇಲೆ 20ಕ್ಕೂ ಅಧಿಕ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ!

ರೈಲಿನೊಳಗೆ ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಡಕಾಯಿತರು

ಇತ್ತೀಚಿನ ಸುದ್ದಿ