ಮನೆಯ ಮುಂದೆಯೇ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ - Mahanayaka

ಮನೆಯ ಮುಂದೆಯೇ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ

jethu cwadare
21/04/2022

ಹೊಸದಿಲ್ಲಿ: ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪೂರ್ವ ದಿಲ್ಲಿಯ ಮಯೂರ್‌ ವಿಹಾರ್‌ ನಲ್ಲಿ ನಡೆದಿದೆ.ಕೊಲೆಯಾದ ಬಿಜೆಪಿ ಮುಖಂಡನನ್ನು ಜಿತು ಚೌಧರಿ(42) ಎಂದು ಗುರುತಿಸಲಾಗಿದೆ.

ಸ್ಥಳೀಯ ಮೂಲಗಳ ಪ್ರಕಾರ, ಚೌಧರಿ ಬುಧವಾರ ತಮ್ಮ ನಿವಾಸದ ಹೊರಗೆ ಕೆಲವು ಜನರೊಂದಿಗೆ ಮಾತನಾಡುತ್ತಿದ್ದಾಗ ಬೈಕ್‌ ನಲ್ಲಿ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ.  ನಾಲ್ಕು ಗುಂಡುಗಳು ಚೌಧರಿ ದೇಹಕ್ಕೆ ತಗುಲಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹಂತಕರು ಬಿಜೆಪಿ ಮುಖಂಡನ ತಲೆ ಮತ್ತು ಹೊಟ್ಟೆಗೆ ಗುಂಡು ಹಾರಿಸಿದ್ದಾರೆ. ತಕ್ಷಣ ಚೌಧರಿ ಅವರನ್ನು ನೋಯ್ಡಾದ ಮೆಟ್ರೋ ಆಸ್ಪತ್ರೆಗೆ ಸಾಗಿಸಲಾದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.


Provided by

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು,ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಆರೋಪಿಗಳ  ಬಗ್ಗೆ  ಈವರೆಗೆ ಯಾವುದೇ ಸುಳಿವು ದೊರಕಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾತ್ರಿಯಾದರೆ ಇಲ್ಲಿ ನೀರಿನಿಂದ ಮೇಲಕ್ಕೆ ಬರುತ್ತವೆ ರಾಶಿ ರಾಶಿ ಮೀನುಗಳು: ಏನಿದರ ರಹಸ್ಯ?

ಕಲ್ಲು ಸಕ್ಕರೆ ಸೇವನೆಯಿಂದ ಈ ಅನಾರೋಗ್ಯ ಸಮಸ್ಯೆಗಳು ಮಾಯ!

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಪರಾರಿ

ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರು ಇಡಲು ನಿರ್ಧಾರ: ಸಿಎಂ ಬೊಮ್ಮಾಯಿ

ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕ ಜಿಗ್ನೇಶ್ ಮೇವಾನಿ ಅರೆಸ್ಟ್!

 

ಇತ್ತೀಚಿನ ಸುದ್ದಿ