ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆ | ಮುಂದೆ ಆದ ಅನಾಹುತ ಏನು ಗೊತ್ತಾ?
13/04/2021
ಚಿತ್ರದುರ್ಗ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಅಲ್ಮೆರಾ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ನಡೆದಿದೆ.
ಗಾಂಧಿನಗರದ ಸೈಯದ್ ಕಜೀರ್ ಎನ್ನುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಅವಘಡ ಸಂಭವಿಸಿದೆ ಎನ್ನುತ್ತಿದ್ದಾರೆ. ಮನೆಯಲ್ಲಿದ್ದ ವಸ್ತುಗಳ ಜೊತೆಗೆ 15 ಸಾವಿರ ಹಣ, ಬಂಗಾರದ ಒಡವೆ ಸೇರಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ.
ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಬಂದಿದ್ದರಿಂದ ಸಂಭವಿಸಲಿದ್ದ ಭಾರಿ ಅನಾಹುತ ತಪ್ಪಿದೆ.