ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿ ನಾಪತ್ತೆ

29/09/2022
ಬೆಳ್ತಂಗಡಿ; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿ ಮನೆಗೆ ಹಿಂತಿರುಗದೆ ನಾಪತ್ತೆಯಾದ ಘಟನೆ ಓಡಲ್ನಾಳದಲ್ಲಿ ಸಂಭವಿಸಿದೆ.
ಇಲ್ಲಿನ ನಿವಾಸಿ ಶೇಖರ ಶೆಟ್ಟಿಗಾರ (53) ಎಂಬವರೇ ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ಇವರು ಮನೆಯಿಂದ ಪೇಟೆಗೆಂದು ಹೋದವರು ಮನೆಗೆ ಹಿಂತಿರುಗಿರಲಿಲ್ಲ.
ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ ಹಿನ್ನಲೆಯಲ್ಲಿ ಮನೆಯವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka