2 ಕೋಟಿ ರೂ. ವೆಚ್ಚದಲ್ಲಿ ಮಂಗಗಳಿಗೆ ಪಾರ್ಕ್ ಸೌಲಭ್ಯ! - Mahanayaka
1:55 AM Wednesday 5 - February 2025

2 ಕೋಟಿ ರೂ. ವೆಚ್ಚದಲ್ಲಿ ಮಂಗಗಳಿಗೆ ಪಾರ್ಕ್ ಸೌಲಭ್ಯ!

park
09/07/2022

ಮೈಸೂರು: ಮಂಗಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ಸರ್ಕಾರ ಎರಡು ಕೋಟಿ ವೆಚ್ಚದಲ್ಲಿ ವಿಶೇಷ ಉದ್ಯಾನವನ ನಿರ್ಮಿಸಲು ನಿರ್ಧರಿಸಿದೆ.  ಸಾರ್ವಜನಿಕ ಸ್ಥಳಗಳಲ್ಲಿ ಮಂಗಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವುದು ಹಾಗೂ ಪ್ರವಾಸಿಗರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ.  ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಾರ್ಕ್ ನಿರ್ಮಾಣವಾಗುತ್ತಿದೆ.

ಬೆಟ್ಟದ ತಪ್ಪಲಿನಲ್ಲಿರುವ ನಾಲ್ಕು ಎಕರೆ ಅರಣ್ಯ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲಾಗುತ್ತಿದೆ.  ಈ ಉದ್ಯಾನವನಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವ ಕೋತಿಗಳಿಗೆ ಇಲ್ಲಿ ಪುನರ್ವಸತಿ ಕಲ್ಪಿಸಲಾಗುವುದು.

ಉದ್ಯಾನದಲ್ಲಿ ವಿಶೇಷ ಮರಗಳು, ಸರೋವರ ಮತ್ತು ಆಸನವನ್ನು ಒದಗಿಸಲಾಗುವುದು.  ಮಂಗಗಳಿಗೆ ಆಹಾರ ಮತ್ತು ವೈದ್ಯಕೀಯ ಸೇವೆ ಒದಗಿಸಲಾಗುವುದು.  ಮಂಗಗಳಿಗೆ ಆಹಾರ ನೀಡಲು ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.  ಉದ್ಯಾನದಲ್ಲಿ ಪಶುವೈದ್ಯರ ಸೇವೆಯೂ ಲಭ್ಯವಿರುತ್ತದೆ.

ಮೈಸೂರು ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.  ಕರ್ನಾಟಕದ ಪ್ರವಾಸಿ ತಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಂಗಗಳ ಹಾವಳಿ ವಿಪರೀತವಾಗಿದೆ.  ಮಂಗಗಳು ಪ್ರವಾಸಿ ತಾಣಗಳ ಸುತ್ತಮುತ್ತ ಓಡಾಡಿ ಪ್ರವಾಸಿಗರ ಸಾಮಾನುಗಳನ್ನು ದೋಚುವುದು ಸಾಮಾನ್ಯ ಸಂಗತಿ, ಇದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಎಲ್ಲ ವಿಷಯಗಳನ್ನು ಅರಿತು ಉದ್ಯಾನವನ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ