ಲಾರಿ—ಸ್ಕೂಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ
ಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ನಡೆದಿದೆ.
ಜಪ್ಪಿನಮೊಗರು ತಂದೊಳಿಗೆ ನಿವಾಸಿ ಗಂಗಾಧರ (45) ಕೊಣಾಜೆ ಸಮೀಪದ ಪಜೀರ್ ನಿವಾಸಿ ನೇತ್ರಾವತಿ(48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನೇತ್ರಾವತಿಯ ಪುತ್ರಿ ಮೋಕ್ಷ (4) ಹಾಗೂ ನೇತ್ರಾವತಿಯ ಅಕ್ಕನ ಮಗ ಜ್ಞಾನೇಶ್ (6) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಂಪ್ ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಕಲ್ಲಾಪು ಬಳಿ ತಲುಪಿದಾಗ ಇಲ್ಲಿನ ಖಾಸಗಿ ಮಾರುಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಲಾರಿ ಬಂದಿದ್ದು, ಈ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ಸ್ಕೂಟರ್ ನಲ್ಲಿದ್ದ ನಾಲ್ವರು ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಗಂಗಾಧರ ಮತ್ತು ನೇತ್ರಾವತಿ ಮೃತಪಟ್ಟಿದ್ದಾರೆ.
ಆರೋಪಿ ಲಾರಿ ಚಾಲಕ ಹನೀಫ್ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka