ಮಂಗಳೂರು ನಗರ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರಿಂದ ದಾಳಿ - Mahanayaka

ಮಂಗಳೂರು ನಗರ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರಿಂದ ದಾಳಿ

mangalore jail
02/04/2023

ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲ್‌ದೀಪ್‌ ಆರ್‌ ಜೈನ್‌ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್‌ ವ್ಯಾಪ್ತಿಯ 5 ಪೊಲೀಸ್‌ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಈ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ನಿನ್ನೆ ಮುಂಜಾನೆ ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 60 ಮಂದಿಯ ಮನೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದರು.  ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ