ಮಂಗಳೂರಿನಲ್ಲಿ ಮತ್ತೆ ಅಹಿತಕರ ಘಟನೆ | ಹಾಡಹಗಲೇ ಗುಂಡಿನ ದಾಳಿ
30/10/2020
ಮಂಗಳೂರು: ನಗರದ ಫಳ್ನೀರ್ ನಲ್ಲಿ ಇಂದು ಸಂಜೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮವಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದವು ಗುಂಡಿನ ದಾಳಿಯೊಂದಿಗೆ ಅಂತ್ಯಕಂಡಿದೆ ಎಂದು ತಿಳಿದು ಬಂದಿದೆ.
ಶುಕ್ರವಾರ ಸಂಜೆ 5:30ರ ವೇಳೆಗೆ ಈ ಘಟನೆ ನಡೆದಿದೆ. ಸಮೋಸದ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಗಿದೆ. ಈ ಸಂದರ್ಭ ಒಂದು ತಂಡವು ಏರ್ ಪಿಸ್ತೂಲ್ ನಿಂದ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಇನ್ನೂ ಈ ದಾಳಿಯ ಹಿನ್ನೆಲೆಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ದಾಳಿಗೆ ಕಾರಣ ಏನು ಎಂಬ ಬಗ್ಗೆ ನಿಖರ ಮಾಹಿತಿಯನ್ನು ನೀಡಿಲ್ಲ. ತನಿಖೆಯ ಬಳಿಕವೇ ಈ ಬಗ್ಗೆ ಮಾಹಿತಿ ಲಭಿಸಲಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.