ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ

ದಂಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಫಳ್ನೀರ್ ನ ಲಾಡ್ಜೊಂದರಲ್ಲಿ ನಡೆದಿದೆ.
ಕೇರಳ ಕಣ್ಣೂರಿನ ರವೀಂದ್ರ (55) ಮತ್ತು ಸುಧಾ (50) ಸಾವಿಗೆ ಶರಣಾದ ದಂಪತಿ. ಲಾಡ್ಜ್ ನಲ್ಲಿ ಫೆಬ್ರವರಿ 6 ರಂದು ಮಧ್ಯಾಹ್ನ ದಂಪತಿ ರೂಮ್ ಪಡೆದಿದ್ದರು. ಬುಧವಾರ ದಂಪತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇವರು ಬಟ್ಟೆ ವ್ಯಾಪಾರಿಗಳು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw