ಮಂಗಳೂರಿನಲ್ಲಿ ದಸರಾ ರಜೆ:  ವಿಶೇಷ ಮಾಹಿತಿ - Mahanayaka
4:03 AM Wednesday 11 - December 2024

ಮಂಗಳೂರಿನಲ್ಲಿ ದಸರಾ ರಜೆ:  ವಿಶೇಷ ಮಾಹಿತಿ

mangalore dasara
24/09/2022

ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 16ರವರೆಗೆ ರಜೆಯನ್ನು ನಿಗದಿಪಡಿಸಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 26ರಿಂದ ಆರಂಭಗೊಳ್ಳುವ ಮಂಗಳೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಸೆ.26ರಿಂದಲೇ ರಜೆ ನೀಡುವಂತೆ ಪೋಷಕರು, ಜನಪ್ರತಿನಿಧಿಗಳು ಸರಕಾರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದರೂ ಕೂಡ ಇದೀಗ ರಾಜ್ಯ ಸರಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಇದರ ಅನ್ವಯ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಿದೆ.

ಅಕ್ಟೋಬರ್ 2ರ ರವಿವಾರ ಕಡ್ಡಾಯವಾಗಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಕಡ್ಡಾಯವಾಗಿ ಸೂಚಿಸಿದೆ. ವಿದ್ಯಾರ್ಥಿಗಳಿಗೆ ನೀಡಲಾದ ಈ ನಾಲ್ಕು ಹೆಚ್ಚುವರಿ ರಜೆಗಳನ್ನು ನವೆಂಬರ್‌ ತಿಂಗಳಿನ ನಾಲ್ಕು ಶನಿವಾರ ಪೂರ್ಣ ದಿನದ ತರಗತಿ ಮತ್ತು ಎರಡು ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ