ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್

ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಅವರು ಇಂದು ಮಂಗಳೂರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ನೀಡಲಾಗಿದ್ದು
ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ. ಇವರು ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಈ ಮೂವರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು.
ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ಮಾಡಲಾಗಿತ್ತು. ಹೀಗಾಗಿ ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗ್ತಿದೆ ಎಂದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw