ಮಂಗಳೂರಿನಲ್ಲಿ ಗಾಂಜಾ ಘಾಟು ಜೋರು: ಮತ್ತಿಬ್ಬರು ವೈದ್ಯರ ಬಂಧನ
ಮಂಗಳೂರಲ್ಲಿ ಗಾಂಜಾ ಘಾಟು ಮತ್ತಷ್ಟು ಜೋರಾಗಿದೆ. ಮೊನ್ನೆಯಷ್ಟೇ ಮಂಗಳೂರು ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮತ್ತೆ ಇಬ್ಬರು ವೈದ್ಯರನ್ನು ಇಂದು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರಾಘವ ದತ್ತಾ(28), ಬೆಂಗಳೂರು ನಿವಾಸಿ ಬಾಲಾಜಿ (29) ಬಂಧಿತ ಆರೋಪಿಗಳು. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಕೇವಲ 10 ದಿನಗಳಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 6 ಪ್ರಕರಣಗಳಲ್ಲಿ 20ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw