ಮಂಗಳೂರು: ಕರ್ನಾಟಕ ದಸಂಸ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

14/04/2025
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಸ್ವಾಭಿಮಾನಿ ಪ್ರೊಸೆಸರ್ ಬಿ ಕೃಷ್ಣಪ್ಪ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಮಂಗಳೂರು ನಗರದಲ್ಲಿರುವ ಜಿಲ್ಲಾ ಕಛೇರಿಯಲ್ಲಿ ನಡೆಸಲಾಯಿತು.
ಜಿಲ್ಲಾ ಸಂಚಾಲಕರಾದ ಸದಾಶಿವ ಪಡುಬಿದ್ರಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು . ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಖಜಾಂಚಿ ನಾಗೇಶ್ ಚಿಲಿಂಬಿ, ಗಗನ್ ಮತ್ತು ದಲಿತ ಕಲಾ ಮಂಡಳಿಯ ಜಿಲ್ಲಾ ಸಂಚಾಲಕ ಕಮಲಾಕ್ಷ ಬಜಾಲ್ ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: