ಮಂಗಳೂರು ಮಹಾನಗರಪಾಲಿಕೆಯ 23ನೇ ಮೇಯರ್ ಆಗಿ ಬಿಜೆಪಿಯ ಜಯಾನಂದ ಅಂಚನ್ ಆಯ್ಕೆ
ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ.
ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾದರು. ಇಂದು ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು.
ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹಿರಿಯ ಕಾರ್ಪೊರೇಟರ್, ದೇರೇಬೈಲ್ ದಕ್ಷಿಣ ವಾರ್ಡ್ ಸದಸ್ಯ ಶಶಿಧರ ಹೆಗ್ಡೆ 14 ಮತಗಳನ್ನಷ್ಟೇ ಗಳಿಸಿದರು. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಸೆಂಟ್ರಲ್ ಮಾರ್ಕೆಟ್ ವಾರ್ಡ್ ಸದಸ್ಯೆ ಪೂರ್ಣಿಮಾ 46 ಮತಗಳನ್ನು ಗಳಿಸಿ ಚುನಾಯಿತರಾದರು. ಅವರ ವಿರುದ್ಧ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಬಂದರ್ ವಾರ್ಡ್ ಸದಸ್ಯೆ ಝೀನತ್ ಶಂಸುದ್ದೀನ್ 14 ಮತಗಳನ್ನು ಗಳಿಸಿದರು.
ಸದಸ್ಯರು ಕೈಯೆತ್ತುವ ಮೂಲಕ ಪರ-ವಿರೋಧ ಮತಗಳನ್ನು ಚಲಾಯಿಸಿದರು. ಎಸ್ ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ತಟಸ್ಥವಾಗಿದ್ದರು.
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka