ಅಕ್ಟೋಬರ್ 25ರಂದು ಮಂಗಳೂರಿನಲ್ಲಿ ‘ಸಂವಿಧಾನ ದೀಕ್ಷೆ’ ಕಾರ್ಯಕ್ರಮ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ‘ಸಂವಿಧಾನ ದೀಕ್ಷೆ’(Samvidhan Deeksha) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.’
ಅಕ್ಟೋಬರ್ 25(ಸೋಮವಾರ)ರ ಸಂಜೆ 4 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ ಡಿಪಿಐ(SDPI) ಮುಖಂಡರು ತಿಳಿಸಿದ್ದಾರೆ.
ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಸಂವಿಧಾನ ದೀಕ್ಷೆ ನೀಡಲಿದ್ದಾರೆ. ಈ ಸಂದರ್ಭ ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ, ದಲಿತ ಹೋರಾಟಗಾರ ಭಾಸ್ಕರ್ ಪ್ರಸಾದ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.
ಮಂಗಳೂರಿನಲ್ಲಿ ಬಜರಂಗದಳ, ಬಿಜೆಪಿ ಪರಿವಾರ ‘ತ್ರಿಶೂಲ ದೀಕ್ಷೆ’ ನೀಡಿ ನೀಡಿದ ವಿಚಾರ ತೀವ್ರವಾಗಿ ಚರ್ಚೆಗೀಡಾಗಿತ್ತು. ಇದೇ ಸಂದರ್ಭದಲ್ಲಿ ಎಸ್ ಡಿಪಿಐ ಸಂವಿಧಾನ ದೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಹಿಂದೂ ಪದ್ಧತಿಯ ಆಚರಣೆಗಳೆಂದರೆ ಕಾಂಗ್ರೆಸ್ ಗೆ ಅಲರ್ಜಿ | ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ಅಮೃತ ಭಾರತಿ ವಿದ್ಯಾಲಯ ಹೆಬ್ರಿಯ ಕನ್ನಡ ಶಿಕ್ಷಕ ಮಹೇಶ ಹೈಕಾಡಿ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಜಿಮ್ ಟ್ರೈನರ್!
ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಕುಮಾರಸ್ವಾಮಿಯ ಗುರಿ: ಜಮೀರ್ ಆರೋಪ
ನಿಧಿಯ ಆಸೆಗೆ ಪತ್ನಿಯನ್ನು ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿದ ವೈದ್ಯ!