ಕುತೂಹಲ ಮೂಡಿಸುತ್ತಿರುವ ಮಂಗಳೂರು ಉತ್ತರ ಕ್ಷೇತ್ರ: SDPI ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ - Mahanayaka
12:25 AM Wednesday 5 - February 2025

ಕುತೂಹಲ ಮೂಡಿಸುತ್ತಿರುವ ಮಂಗಳೂರು ಉತ್ತರ ಕ್ಷೇತ್ರ: SDPI ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ

sdpi
04/04/2023

2023 ರ ಚುನಾವಣೆಯಲ್ಲಿ ಕುತೂಹಲ ಮೂಡಿಸುತ್ತಿರುವ ಕ್ಷೇತ್ರವಾಗಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ. ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕಭರತ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಕಣಕ್ಕಿಳಿಸುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ನಲ್ಲಿ ಮೊಯಿದ್ದೀನ್ ಬಾವ ಮತ್ತು ಇನಾಯತ್ ಅಲಿ ನಡುವೆ ಸೀಟ್ ಗಾಗಿ ಕಾಳಗವಿದ್ದರೂ ಇನಾಯತ್ ಅಲಿಯವರಿಗೆ ಸೀಟು ಫೈನಲ್ ಆಗಿದೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ದೊರೆಯುತ್ತಿದೆ.

ಇದೇ ಸಂದರ್ಭದಲ್ಲಿ ಎಸ್ ಡಿಪಿಐ ನಡೆ ಕುತೂಹಲ ಕೆರಳಿಸಿದೆ. ವಿಶ್ವಾಸನೀಯ ಮೂಲಗಳ ಪ್ರಕಾರ ಈ ವಾರದೊಳಗೆ ಎಸ್ ಡಿಪಿಐ ಕೂಡ ತನ್ನ ಅಭ್ಯರ್ಥಿಯನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆಗೊಳಿಸಲಿದ್ದಾರೆ  ಎಂಬ ಮಾಹಿತಿ ದೊರೆತಿದೆ.

ಮುಖ್ಯವಾಗಿ ರಾಜ್ಯ ಕಾರ್ಯದರ್ಶಿ ಯುವ ರಾಜಕಾರಣಿ ಅಶ್ರಫ್ ಮಾಚಾರ್, ಮಾಜಿ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಹೆಸರು ಕೇಳಿ ಬರುತ್ತಿದೆ. ಒಂದು ವೇಳೆ ಎಸ್ ಡಿಪಿಐ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಗೆಲುವು ಕಬ್ಬಿಣದ ಕಡಲೆಕಾಯಿ ಆಗಲಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ