ಜ್ಯುವೆಲ್ಲರ್ ಸಿಬ್ಬಂದಿಯ ಹತ್ಯೆ ಪ್ರಕರಣ: ಶಂಕಿತ ವ್ಯಕ್ತಿಯ ಸಿಸಿ ಕ್ಯಾಮರ ಚಿತ್ರ ರಿಲೀಸ್
ಮಂಗಳೂರು ನಗರದ ಬಲ್ಮಠ–ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ ಸಿಬ್ಬಂದಿ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಸಿಸಿಟಿವಿ ಕ್ಯಾಮೆರಾ ಚಿತ್ರವನ್ನು ಪೊಲೀಸರು ಇಂದು ರಿಲೀಸ್ ಮಾಡಿದ್ದಾರೆ.
ಶಂಕಿತ ಆರೋಪಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 3ರಂದು ಮಧ್ಯಾಹ್ನ ಸುಮಾರು 3:30 ಗಂಟೆಯಿಂದ 3.45 ರ ನಡುವೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠ ರಸ್ತೆಯಲ್ಲಿನ ಮಂಗಳೂರು ಜ್ಯುವೆಲ್ಲರ್ಸ್ ಗೆ ಈ ವ್ಯಕ್ತಿಯು ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿಯೊಳಗೆ ಇದ್ದ ಸಿಬ್ಬಂದಿ ರಾಘವೇಂದ್ರ ಆಚಾರ್ ಎಂಬುವವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.
ಸ್ಥಳೀಯ ಸಿಸಿಟಿವಿಗಳಲ್ಲಿ ದಾಖಲಾದ ಚಿತ್ರಣಗಳಲ್ಲಿ ಈ ವ್ಯಕ್ತಿಯ ಚಿತ್ರವು ಪತ್ತೆಯಾಗಿದೆ ಪೊಲೀಸರು ತಿಳಿಸಿದ್ದಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಎಸಿಪಿ ಸಿಸಿಬಿ ಪಿ.ಎ. ಹೆಗಡೆ-9945054333, ಎಸಿಪಿ ಕೆಂದ್ರ ಉಪವಿಭಾಗದ ಮಹೇಶ್ ಕುಮಾರ್ -9480805320 ಅವರ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw