ಮಂಗಳೂರಿನ ಖಾಸಗಿ ಆಸ್ಪತ್ರೆಯ ಯುವ ವೈದ್ಯ ಕೊರೊನಾಕ್ಕೆ ಬಲಿ - Mahanayaka
3:11 PM Friday 20 - September 2024

ಮಂಗಳೂರಿನ ಖಾಸಗಿ ಆಸ್ಪತ್ರೆಯ ಯುವ ವೈದ್ಯ ಕೊರೊನಾಕ್ಕೆ ಬಲಿ

dr mahbasheera
28/04/2021

ಮಂಗಳೂರು: ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯೆಯೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ ಹೊರ ವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕೇರಳದ ತಲಶ್ಯೇರಿ ಮೂಲದ ಡಾ.ಮಾಹಾಬಷೀರಾ ಕೊರೊನಾಕ್ಕೆ ಬಲಿಯಾದ ಮಹಿಳೆಯಾಗಿದ್ದಾರೆ. 8 ತಿಂಗಳ ಹಿಂದೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಶವಾಫೆರ್ ಮಹಮ್ಮದ್ ಎಂಬವರನ್ನು ಮದುವೆಯಾಗಿದ್ದರು.

ಈ ದಂಪತಿಗೆ ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಹಾಬಷೀರಾಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ. ಡಾ.ಮಾಹಾಬಷೀರಾ ಅವರು 6 ತಿಂಗಳ ಗರ್ಭಿಣಿಯಾಗಿದ್ದರು.


Provided by

ಇತ್ತೀಚಿನ ಸುದ್ದಿ