ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಂದು ಚಿನ್ನಾಭರಣ ದೋಚಿದ್ದವನನ್ನು ಬಂಧಿಸಿದ ಮಂಗಳೂರು ಪೊಲೀಸರು

ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಮಂಗಳೂರು ಕಾರ್ ಸ್ಟ್ರೀಟ್ ಗೆ ತೆರಳಿ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೇಸ್ ಬಯಲಾಗಿದೆ.
ಆರೋಪಿ ಅಹಮ್ಮದ್ ಅಕ್ಮಲ್ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಮುತ್ತಿನ ಎರಡು ಎಳೆಯ ಬಂಗಾರದ ಸರ, ಸಣ್ಣ ಪದಕವಿರುವ ಒಂದು ಚೈನ್, ಕಿವಿಯೊಲೆ ಮೂರು ಜೊತೆ, ಐದು ಉಂಗುರ, ಎರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರ ದಾಖಲಾತಿಗಳು ಇದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw