ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ - Mahanayaka

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ

bus01
15/02/2022

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸೀ ಬರ್ಡ್‌ ಹೆಸರಿನ ಖಾಸಗಿ ಬಸ್‌ ತುಂಬೆ ಬಿ.ಎ.ಕಾಲೇಜು ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ವೇಳೆ ಬಸ್‌ನ ಟ್ಯಾಂಕ್‌ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ: ಡಿ.ಕೆ.ಶಿವಕುಮಾರ್ ಸೂಚನೆ ತಿರಸ್ಕರಿಸಿದ ಜಮೀರ್

ಗಟ್ಟದ ಗಡಿಯಲ್ಲಿ ಚೌಂಡಿಯ ತಡೆ/ ಕಾನದ-ಕಟದರ ಸಾಮಾರ್ಥ್ಯ ಪ್ರದರ್ಶನ/ ತುಳುನಾಡಿನಲ್ಲಿ ಚೌಂಡಿ, ಚೌಂಡಿ ಗುಳಿಗನಿಗೆ ನಿಲೆ: ಸಂಚಿಕೆ: 15

ಫೆ. 17ರಂದು ಹಾರಿಹಿತ್ಲು, ರೆಂಜಾಳ ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಸದನದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಇತ್ತೀಚಿನ ಸುದ್ದಿ