ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು - Mahanayaka

ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು

manhole
20/12/2021

ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ವೇಳೆ ಉಸಿರುಗಟ್ಟಿ ಪೌರಕಾರ್ಮಿಕ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಸೋಮವಾರ ನಡೆದಿದೆ.

ಮಧು(27) ಮೃತ ಪೌರಕಾರ್ಮಿಕ ಇವರು, ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ತೀವ್ರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧು ಮೃತಪಟ್ಟಿದ್ದಾರೆ.

ಪೌರಕಾರ್ಮಿಕನನ್ನು ಬಲವಂತವಾಗಿ ಮ್ಯಾನ್ ಹೋಲ್​ಗೆ ಇಳಿಸಲಾಗಿದೆ ಎಂದು ಆರೋಪಿಸಿ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ನೇತೃತ್ವದಲ್ಲಿ ಸ್ಥಳೀಯ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೃತಪಟ್ಟಿದ್ದಾಳೆ ಎನ್ನಲಾಗಿದ್ದ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ

ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್

ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್

ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ

ಇತ್ತೀಚಿನ ಸುದ್ದಿ