ಕಾರ್ಮಿಕರಿಗೆ ಡಿಕ್ಕಿ ಹೊಡೆದು ಕಾರು ಪರಾರಿ: ಓರ್ವ ಸಾವು, ನಾಲ್ವರಿಗೆ ಗಾಯ
ಮಣಿಪಾಲ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಣಿಪಾಲ ಸೆಂಟ್ರಲ್ ಪಾರ್ಕ್ ಹೊಟೇಲ್ ಬಳಿ ಇಂದು ನಸುಕಿನಲ್ಲಿ ನಡೆದಿದೆ.
ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸಾಹಿನ್ ಎಸ್.ಕೆ. (18) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಸುಮಿತ್ ಜಸ್ವಾಲ್, ಸಂಸುಲ್ ಆರೀಫ್ ಹೋಕ್ಯೂ, ಲತೀಪುಲ್ ಚೌದುರಿ, ಸುಕ್ದೇಬ್ ಕರ್ಮಾಕರ್ ಎಂಬವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಾಹಿನ್ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ದೀಕ್ಷಿತ್ ಜಿ.ರಾಜ್ ಎಂಬಾತ ಚಲಾಯಿಸುತ್ತಿದ್ದ ಕಾರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಬಳಿಕ ಚಾಲಕ, ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka