ಗಾಂಜಾ ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ಬಂಧನ - Mahanayaka
11:28 PM Wednesday 5 - February 2025

ಗಾಂಜಾ ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ಬಂಧನ

manipala ganja case
15/01/2023

ಗಾಂಜಾ ಹಾಗೂ ಮಾದಕವಸ್ತು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ತಂಡವೊಂದನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲದ ವಿ.ಪಿ ನಗರದ ಬಳಿಯ ಫ್ಲಾಟ್ ವೊಂದರಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು 27 ವರ್ಷದ ಮುಝಾಮಿಲ್, 25ವರ್ಷದ ಮೊಹಮ್ಮದ್ ಅನಾಜ್ ಸಾಹೇಬ್, 26 ವರ್ಷದ ಮೊಹಮ್ಮದ್ ರಫೀಕ್ ಹಾಗೂ 19 ವರ್ಷದ ನಿಯಾಲ್ ಎಂದು ಗುರುತಿಸಲಾಗಿದೆ.

ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಜ.13 ರಂದು ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯ ಫ್ಲಾಟ್ ವೊಂದರ ರೂಮಿನಲ್ಲಿ ಮಾದಕ ವಸ್ತುಗಳೊಂದಿಗೆ ದರೋಡೆಗೆ ಸಂಚು ರೂಪಿಸಿ, ಹೊಂಚು ಹಾಕುತ್ತಿದ್ದ ವ್ಯಕ್ತಿಗಳನ್ನು ದಾಳಿ ಮಾಡಿ ಬಂಧಿಸಿದ್ದಾರೆ.

ಬಂಧಿತರಿಂದ 5.0 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು, 110 ಗ್ರಾಂ ಗಾಂಜಾ, ದರೋಡೆಗೆ ಹೊಂದಿದ್ದ ಮಾರಕಾಯುಧಗಳನ್ನು ಹಾಗೂ 5 ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ