ಮಣಿಪುರ ಸಿಎಂ ಮಣಿಪುರ ಹಿಂಸಾಚಾರದ ಮಾಸ್ಟರ್ ಮೈಂಡ್: ಕುಕಿ ಸಮುದಾಯದ ಶಾಸಕರಿಂದಲೇ ಆರೋಪ
ಮಣಿಪುರ ಸಿಎಂ ಬಿರೇನ್ ಸಿಂಗ್ ಮಣಿಪುರ ಹಿಂಸಾಚಾರದ ʼಮಾಸ್ಟರ್ ಮೈಂಡ್ʼ ಆಗಿದ್ದಾರೆ ಎಂದು ಕುಕಿ ಸಮುದಾಯದ ಶಾಸಕರು ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕುಕಿ ಸಮುದಾಯದ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್ ಗೆ ಸುಳ್ಳು ಹೇಳಿದ್ದಕ್ಕೂ ಅವರು ಆಕ್ರೋಶ ವ್ಯಕ್ತಪಡಿದ್ದಾರೆ.
ಪೋಲಿಯೆನ್ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಸಹಿ ಮಾಡಿದ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನವೆಂಬರ್ 8 ರಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಭಾರತದ ಸಾಲಿಸಿಟರ್ ಜನರಲ್ ಮುಖ್ಯಮಂತ್ರಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಎಲ್ಲಾ ಕುಕಿ ಶಾಸಕರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿರುವುದು ತಿಳಿದು ಬಂದಿದೆ.
ಇದು ಅವಾಸ್ತವಿಕವಾಗಿದೆ. ಮೈತೈ ಮತ್ತು ಕುಕಿ ಬುಡಕಟ್ಟು ಜನಾಂಗದವರ ನಡುವೆ ಜನಾಂಗೀಯ ಹಿಂಸಾಚಾರ ಸಂಭವಿಸಿದ ಅನಂತರ ಕಳೆದ 18 ತಿಂಗಳುಗಳಲ್ಲಿ ಮಣಿಪುರ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ. ಸಾಲಿಸಿಟರ್ ಜನರಲ್ ಹೇಳಿಕೆಯು “ಸುಪ್ರೀಂಕೋರ್ಟ್ ಅನ್ನು ತಪ್ಪುದಾರಿಗೆಳೆಯುವಂತಿದೆ” ಎಂದು ಶಾಸಕರು ಪ್ರತಿಪಾದಿಸಿದ್ದಾರೆ.
ನಾವು 2023ರ ಮೇ 3ರಿಂದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಹಿಂಸಾಚಾರದ ಹಿಂದಿನ ಮಾಸ್ಟರ್ ಮೈಂಡ್ ಆಗಿರುವುದರಿಂದ ಭವಿಷ್ಯದಲ್ಲಿ ಅವರನ್ನು ಭೇಟಿ ಮಾಡುವ ಯಾವುದೇ ಉದ್ದೇಶವನ್ನು ಕೂಡ ಹೊಂದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ಈ ಹಿಂಸಾಚಾರ ಇಂದಿನವರೆಗೂ ಮುಂದುವರಿದಿದೆ. ಇದರಲ್ಲಿ ಇತ್ತೀಚಿನದ್ದು 2024ರ ನ.7ರಂದು ಝೊಸಾಂಗ್ಕಿಮ್ ಹ್ಮಾರ್ ರನ್ನು ಕ್ರೂರವಾಗಿ ಕೊಂದು ಸುಟ್ಟುಹಾಕಿರುವುದಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj