ಅಸ್ಸಾಂ ರೈಫಲ್ಸ್ ವಿರುದ್ಧ ಎಫ್ ಐಆರ್: ಮಣಿಪುರ ಪೊಲೀಸರ ವಾದ ಏನು..?
ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದ ಉಂಟಾದ ವೇಳೆ ತಮ್ಮ ವಾಹನವನ್ನು ತಡೆದಿರುವ ಆರೋಪವನ್ನು ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಹೊರಿಸಿದ್ದಾರೆ.
ಮಣಿಪುರ ಪೊಲೀಸರು ಎಫ್ಐಆರ್ ಅನ್ನು ನ್ಯಾಯದ ಅಪಹಾಸ್ಯ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದು, ಕುಕಿ ಮತ್ತು ಮೈಟೈ ಪ್ರದೇಶಗಳ ನಡುವಿನ ಬಫರ್ ವಲಯಗಳಲ್ಲಿ ಕಾಮಂಡ್ ಕೇಂದ್ರ ಕಚೇರಿ ನೀಡಿದ್ದ ಕರ್ತವ್ಯವನ್ನು ನಿರ್ವಹಿಸುತ್ತಿದ್ದುದ್ದಾಗಿ ಹೇಳಿದ್ದಾರೆ. ಆಗಸ್ಟ್ 5 ರಂದು ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಗೋಥೋಲ್ ರಸ್ತೆಯಲ್ಲಿ ಅಸ್ಸಾಂ ರೈಫಲ್ಸ್ ಪೊಲೀಸ್ ವಾಹನಗಳನ್ನು ತಡೆದಿದೆ ಎಂದು ಪೊಲೀಸರು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದಾರೆ.
ಕುಕಿ ಉಗ್ರಗಾಮಿಗಳ ಹುಡುಕಾಟದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲು ರಾಜ್ಯ ಪೊಲೀಸರು ಕ್ವಾಕ್ಟಾದಲ್ಲಿರುವ ಫೋಲ್ಜಾಂಗ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
9 ಅಸ್ಸಾಂ ರೈಫಲ್ಸ್ ತಮ್ಮ ಕ್ಯಾಸ್ಪರ್ ವಾಹನವನ್ನು, ಸಿಬ್ಬಂದಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದರು ಎಂದು ಪೊಲೀಸರು ಹೇಳಿದ್ದಾರೆ. ಇಂಫಾಲದ ಸಚಿವಾಲಯದ ಮೂಲಗಳ ಪ್ರಕಾರ, ಸೇನೆ ಈ ಸಮಸ್ಯೆಯನ್ನು ರಾಜ್ಯ ಸರ್ಕಾರದೊಂದಿಗೆ ಉನ್ನತ ಮಟ್ಟದಲ್ಲಿ ಬಲವಾಗಿ ಪ್ರಸ್ತಾಪಿಸಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw