ವೀಕೆಂಡ್ ನಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದೆ INDIA ನಿಯೋಗ: ಈ ಟೀಂನಲ್ಲಿ ಯಾರಿದ್ದಾರೆ ಗೊತ್ತಾ..? - Mahanayaka
10:52 AM Saturday 21 - September 2024

ವೀಕೆಂಡ್ ನಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದೆ INDIA ನಿಯೋಗ: ಈ ಟೀಂನಲ್ಲಿ ಯಾರಿದ್ದಾರೆ ಗೊತ್ತಾ..?

28/07/2023

ಇತ್ತೀಚಿಗೆ ರಚನೆಗೊಂಡ ಪ್ರತಿಪಕ್ಷಗಳ ಮೈತ್ರಿಕೂಟ ‘INDIA’ದ 20 ಸಂಸದರ ನಿಯೋಗ ಶನಿವಾರ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದೆ. ಎರಡು ದಿನಗಳ ಕಾಲ ಅಲ್ಲಿನ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಂಸತ್ತಿಗೆ ಶಿಫಾರಸುಗಳನ್ನು ಮಾಡಲಿದೆ.

ಮಣಿಪುರ ಭೇಟಿಗೂ ಮುನ್ನ ಲೋಕಸಭೆಯ ಕಾಂಗ್ರೆಸ್‌ ಉಪ ನಾಯಕ ಗೌರವ್ ಗೊಗೊಯ್ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

ಈ ಕುರಿರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್, 16 ಪಕ್ಷಗಳ 20 ಸಂಸದರು ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದರು.


Provided by

ಪ್ರತಿಪಕ್ಷಗಳ ನಿಯೋಗ ರಾಜ್ಯ ಭೇಟಿಗೆ ಅನುಮತಿ ನೀಡುವಂತೆ ಕೋರಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ INDIA ಪತ್ರ ಬರೆದಿದ್ದು, ಅವರು ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಯೋಗವು ಭಾನುವಾರ ಬೆಳಗ್ಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಲಿದೆ ಎಂದು ಹುಸೇನ್ ಅವರು ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹಾಗೂ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲು ನಾವು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡಲು ಸಹ ನಾವು ಅನುಮತಿ ಪಡೆದಿದ್ದೇವೆ ಎಂದು ಹುಸೇನ್ ಸುದ್ದಿಗಾರರಿಗೆ ಹೇಳಿದ್ದಾರೆ.

ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಮತ್ತು ಗೌರವ್ ಗೊಗೊಯ್, ಟಿಎಂಸಿಯ ಸುಶ್ಮಿತಾ ದೇವ್, ಜೆಎಂಎಂನ ಮಹುವಾ ಮಜಿ, ಡಿಎಂಕೆಯ ಕನಿಮೊಳಿ, ಎನ್‌ಸಿಪಿಯ ಮೊಹಮ್ಮದ್ ಫೈಜಲ್, ಆರ್‌ಎಲ್‌ ಡಿಯ ಜಯಂತ್ ಚೌಧರಿ, ಆರ್‌ ಜೆಡಿಯ ಮನೋಜ್ ಕುಮಾರ್ ಝಾ, ಟಿಎಂಸಿಯ ಎನ್ ಕೆ ಪ್ರೇಮಚಂದ್ರನ್ ಮತ್ತು ಜೆಡಿಯು ಮುಖ್ಯಸ್ಥ ರಾಜೀವ್ ರಂಜನ್(ಲಾಲನ್) ಸಿಂಗ್ ಸೇರಿದಂತೆ ಪ್ರತಿಪಕ್ಷಗಳ 20 ಸಂಸದರು INDIA ನಿಯೋಗದಲ್ಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ