ಭಯಾನಕ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್..! - Mahanayaka
10:56 AM Sunday 22 - December 2024

ಭಯಾನಕ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಗ್ಯಾಂಗ್ ರೇಪ್..!

20/07/2023

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಾಂಗ್ಪೋಕ್ಪಿ ಎಂಬಲ್ಲಿ ನಡೆದಿದೆ ಎಂದು ದೇಶೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಆರೋಪಿಸಿದೆ.

ಪೊಲೀಸರ ಪ್ರಕಾರ ಕಾಂಗ್ಪೋಕ್ಪಿಯಲ್ಲಿ ಎಫ್ಐಆರ್ ದಾಖಲಾಗಿದೆಯಾದರೂ ಬೇರೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ. ಈ ಘಟನೆಯ ಬಗ್ಗೆ ವ್ಯಾಪಕ ಖಂಡನೆ, ಆಕ್ರೋಶ ವ್ಯಕ್ತವಾಗಿದ್ದು, ಈ ದುಷ್ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗತೊಡಗಿದೆ.

ಈ ಪ್ರಕರಣದ ತನಿಖೆಯನ್ನು ನಡೆಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಎನ್ ಬಿರೇನ್ ಸಿಂಗ್ ಆದೇಶ ನೀಡಿದ್ದಾರೆ. ಅಸಹಾಯಕ ಮಹಿಳೆಗೆ ನಿರಂತರ ಕಿರುಕುಳ ನೀಡುತ್ತಿರುವುದನ್ನು ಈ ವೀಡಿಯೋ ತೋರಿಸುತ್ತದೆ. ಮಹಿಳೆ ಕಣ್ಣೀರು ಹಾಕುತ್ತಾ ಅಂಗಲಾಚುತ್ತಾ ಸಹಾಯವನ್ನು ಯಾಚಿಸುವ ದೃಶ್ಯ ಇದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ