ಶಾಲಾ ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು
ಮಂಜೇಶ್ವರ ಸಮೀಪದ ಮಿಯಾಪದವು ಬಿಳಿಯೂರು ಎಂಬಲ್ಲಿ ಇಂದು ಬೈಕ್ ಹಾಗೂ ಶಾಲಾ ಬಸ್ ನಡುವೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೊರಟ್ಟಿದ್ದ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.
ಪ್ರೀತೇಶ್ ಶೆಟ್ಟಿ (21) ಹಾಗೂ ಅಭಿಷೇಕ್ ಎಂ (21) ಮೃತಪಟ್ಟ ದುರ್ದೈವಿಗಳು. ಮಿಯಾಪದವು ಬಿಳಿಯೂರು ಬಳಿ ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ಮುಂಭಾಗದಿಂದ ಬರುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ಪರಿಣಾಮ ವಿದ್ಯಾರ್ಥಿಗಳಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಮಂಗಳೂರಿನ ಪ್ರೇರಣಾ ಪಿಯು ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ನನಗೆ ಹೆಣ್ಣಾಗಿ ಬದುಕಲು ಇಷ್ಟ, ನನ್ನನ್ನು ಬದುಕಲು ಬಿಡಿ: ನಿಝಾಮ್ ಮನವಿ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw