ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ | ಏಮ್ಸ್ ಅಧಿಕಾರಿ ಮಾಹಿತಿ - Mahanayaka
6:03 AM Thursday 12 - December 2024

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ | ಏಮ್ಸ್ ಅಧಿಕಾರಿ ಮಾಹಿತಿ

manmohan singh
16/10/2021

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ಏಮ್ಸ್ ನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶನಿವಾರ ಏಮ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವರ ಹಾಗೂ ತೀವ್ರ ನಿಶಕ್ತಿಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಇದೀಗ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆತಂಕದಲ್ಲಿದ್ದ ಅವರ ಅಭಿಮಾನಿಗಳು ನಿಟ್ಟುಸಿರುವ ಬಿಡುವಂತಹ ಸುದ್ದಿ ಇದೀಗ ಬಂದಿದೆ.

ಮನಮೋಹನ್ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಏಪ್ರಿಲ್ ನಲ್ಲಿ ಕೊವಿಡ್ 19 ಪಾಸಿಟಿವ್ ಆದ ಸಂದರ್ಭದಲ್ಲಿ ಕೂಡ ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ನಾನು ಕಬಡ್ಡಿ ಆಡಿದನ್ನು ವಿಡಿಯೋ ಮಾಡಿದವ ‘ರಾವಣ’ | ಪ್ರಗ್ಯಾ ಸಿಂಗ್ ಠಾಕೂರ್

ಅಮಾನವೀಯ ಘಟನೆ: ಎಂಡೋ ಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ

ಉಗ್ರಪ್ಪಗೆ ರಕ್ಷಣೆ ಸಲೀಂ ಅವರ ಉಚ್ಛಾಟನೆ: “ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು” | ಕುಮಾರಸ್ವಾಮಿ ಕಿಡಿ

ಉಡುಪಿ: ‘ದುರ್ಗಾ ದೌಡ್’ ಮೆರವಣಿಗೆಯಲ್ಲಿ ಹಿಂದೂ ಜಾಗರಣ ಕಾರ್ಯಕರ್ತರಿಂದ ತಲವಾರು ಪ್ರದರ್ಶನ

ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರ ದಾರುಣ ಸಾವು!

ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ 89 ಸಾವಿರ ರೂ. ಪಂಗನಾಮ ಹಾಕಿದ ಸೈಬರ್ ಕಳ್ಳರು!

ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ: ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ

ಇತ್ತೀಚಿನ ಸುದ್ದಿ